ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಎಲ್ಲಾ ಆಸ್ಪತ್ರೆಗಳೂ ಕೊರೋನಾ ರೋಗಿಗಳ ಚಿಕಿತ್ಸೆಗೆ ಬೆಡ್ ಮೀಸಲಿಡುವಂತೆ ಕರೆ ನೀಡಿದ್ದಾರೆ.
									
										
								
																	
ಕೇಂದ್ರ ಸರ್ಕಾರ ಈ ಸಂಬಂಧ ಎಲ್ಲಾ ಸಚಿವಾಲಯಗಳಿಗೂ ಮತ್ತು ವಿಭಾಗಗಳಿಗೂ ಪತ್ರ ಬರೆದಿದ್ದು, ತಮ್ಮ ಅಧೀನದಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಬೆಡ್ ಮೀಸಲಿಡಿ ಮತ್ತು ಅಗತ್ಯ ಸೌಲಭ್ಯ ಒದಗಿಸಿ ಎಂದು ಸೂಚನೆ ನೀಡಿದೆ.
									
			
			 
 			
 
 			
			                     
							
							
			        							
								
																	ಕೊರೋನಾ ವಿರುದ್ಧ ಹೋರಾಡುತ್ತಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವಾಗಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಮತ್ತು ವಿಭಾಗಗಳ ಅಧೀನದಲ್ಲಿ ಬರುವ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಿ ಎಂದು ಪತ್ರದಲ್ಲಿ ಹೇಳಲಾಗಿದೆ.