ಲಾಲ್ ಬಹದ್ದೂರ್ ಶಾಸ್ತ್ರಿ ನಿವಾಸಕ್ಕೆ ಭೇಟಿ ನೀಡಿದ ಮೋದಿ

ಸೋಮವಾರ, 6 ಮಾರ್ಚ್ 2017 (12:51 IST)
ಉತ್ತರಪ್ರದೇಶ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ ಪ್ರದಾನಿ ಮೋದಿ, ದಿವಂಗತ ಮಾಜಿ ಪ್ರದಾನಿ ಲಾಲ್ ಬಹದ್ದೂರ್ ಶಾಸ್ತ್ರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ವಾರಣಾಸಿಯ ರಾಮನಗರದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನಿವಾಸಕ್ಕೆ ಕಾಲ್ನಡಿಗೆಯಲ್ಲಿ ಆಗಮಿಸಿದರು. ಲಾಲ್ ಬಹದ್ದೂರ್ ಅವರ ಪ್ರತಿಮೆಗೆ ನಮನ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು.
 
ಇಂದು ಬೆಳಿಗ್ಗೆ ಪ್ರಧಾನಿ ಮೋದಿ, ಗಡವಾಘಾಟ್ ಆಶ್ರಮ ಸೇರಿದಂತೆ ಕೆಲ ಐತಿಹಾಸಿಕ ಪ್ರದೇಶಗಳಿಗೆ ಭೇಟಿ ನೀಡಿದರು. 
 
ನಂತರ ವಾರಣಾಸಿಯಲ್ಲಿ ಚುನಾವಣೆ ಪ್ರಚಾರ ಕೈಗೊಂಡ ಅವರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಬಿಜೆಪಿ ಪಕ್ಷವನ್ನು ಬಹುಮತದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
 
ಇಂದು ಸಂಜೆ ಚುನಾವಣೆ ಪ್ರಚಾರಕ್ಕೆ ಅಂತಿಮ ತೆರೆ ಬೀಳಲಿದ್ದು, ಮಾರ್ಚ್ 8 ರಂದು 7ನೇಯ, ಕೊನೆಯ ಹಂತದ ಮತದಾನ ನಡೆಯಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ 122 ಶಾಸಕರಿಗೂ ನೆಮ್ಮದಿಯಿಂದ ಇರಗೊಡುವುದಿಲ್ಲ ಜಯಾ ಆತ್ಮ