Publish Date: Mon, 25 Jun 2018 (10:23 IST)
Updated Date: Mon, 25 Jun 2018 (10:26 IST)
ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಲು ಪ್ರಧಾನಿ ಮೋದಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ವಾಜಪೇಯಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 93 ವರ್ಷದ ಬಿಜೆಪಿಯ ಹಿರಿಯ ನಾಯಕನನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಆಗಮಿಸಿ ಸುಮಾರು 20 ನಿಮಿಷ ಕಾಲ ಕಳೆದರು ಎನ್ನಲಾಗಿದೆ.
ವಾಜಪೇಯಿ ಇನ್ನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿಲ್ಲ. ಅವರ ಆರೋಗ್ಯ ಇದೀಗ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.