Publish Date: Wed, 29 Apr 2026 (11:47 IST)
Updated Date: Wed, 29 Apr 2026 (11:50 IST)
ವಾರಣಾಸಿ: ಒಂದೆಡೆ ಪಶ್ಚಿಮ ಬಂಗಾಲದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದರೆ ಇತ್ತ ಪ್ರಧಾನಿ ಮೋದಿ ಇಂದು ಕಾಶಿ ವಿಶ್ವನಾಥನ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಹೇಗಾದರೂ ಬಿಜೆಪಿ ಗೆಲ್ಲಬೇಕು ಎಂದು ಪಣ ತೊಟ್ಟಿರುವ ಪ್ರಧಾನಿ ಮೋದಿ ಸತತವಾಗಿ ಅಲ್ಲಿ ಸಮಾವೇಶ, ರೋಡ್ ಶೋಗಳನ್ನು ಮಾಡಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಕೊನೆಯ ಬಾರಿಗೆ ಪ್ರಚಾರ ಭಾಷಣ ಮಾಡುವಾಗ ಮುಂದೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತೇನೆ ಎಂದು ಪ್ರತಿಜ್ಞೆ ಮಾಡಿ ತೆರಳಿದ್ದರು. ಇದೀಗ ಬಂಗಾಲ ಚುನಾವಣೆ ನಡೆಯುವೇ ಮೋದಿ ಕಾಶಿ ವಿಶ್ವನಾಥನ ಸನ್ನಿಧಾನಕ್ಕೆ ಬಂದಿದ್ದಾರೆ.
ಇಂದು ಬೆಳಿಗ್ಗೆ ಬಂದ ಪ್ರಧಾನಿ ಮೋದಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅಲ್ಲಿ ತಮ್ಮನ್ನು ನೋಡಲು ನೆರೆದಿದ್ದ ಮಕ್ಕಳೂ ಸೇರಿದಂತೆ ಸಾರ್ವಜನಿಕರತ್ತ ಕೈ ಬೀಸಿ ತೆರಳಿದ್ದಾರೆ. ಕೆಲವು ಹೊತ್ತು ವಿಶ್ವನಾಥನ ಸನ್ನಿಧಿಯಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಿದ್ದು ನೋಡಿದರೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಾರ್ಥಿಸಿರಬಹುದು ಎನ್ನಲಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ