Select Your Language

Notifications

webdunia
webdunia
webdunia
webdunia

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ ಸಿಎಂ ಬೊಮ್ಮಾಯಿ

pm modi mysore yoga ಯೋಗ ಮೈಸೂರು ಪ್ರಧಾನಿ ಮೋದಿ
ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ.
ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13 ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು.
ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ವಹಿಸುವಂತೆ ಸೂಚಿಸಿದರು.
ಇದರೊಂದಿಗೆ ಕೇಂದ್ರ ಆಯುಷ್ ಸಚಿವಾಲಯವು ಯೋಗಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನವನ್ನು ಸಹ ಏರ್ಪಡಿಸಿದೆ. ಇದಕ್ಕೆ ಅಗತ್ಯ ಸಹಕಾರವನ್ನು ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಸೂಚಿಸಿದರು.
ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಮತ್ತೆ ಜಿಗಿದ ಕೊರೊನಾ: 5233 ಸೋಂಕು ದೃಢ