Publish Date: Wed, 01 Nov 2017 (08:04 IST)
Updated Date: Wed, 01 Nov 2017 (08:10 IST)
ನವದೆಹಲಿ: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.
ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕ ಜನತೆಗೆ ನನ್ನ ಶುಭ ಹಾರೈಕಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಇಂದು ಕೇರಳ ರಾಜ್ಯಕ್ಕೂ ರಾಜ್ಯೋತ್ಸವ ದಿನ. ಹೀಗಾಗಿ ಕೇರಳ ರಾಜ್ಯದ ಜನತೆಗೂ ಮಲಯಾಳಂ ಭಾಷೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭಕೋರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ