Publish Date: Mon, 25 Dec 2023 (11:01 IST)
Updated Date: Mon, 25 Dec 2023 (11:01 IST)
ನವದೆಹಲಿ: ಇಂದು ದೇಶದಾದ್ಯಂತ ಕ್ರಿಶ್ಚಿಯನ್ ಬಾಂಧವರು ಕ್ರಿಸ್ ಮಸ್ ಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ್ದಾರೆ.
ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಿನ್ನೆ ಮಧ್ಯರಾತ್ರಿಯಿಂದಲೇ ಚರ್ಚ್ ಗಳಲ್ಲಿ ಪ್ರಾರ್ಥನೆ, ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಂದು ಪರಸ್ಪರ ಸಿಹಿ ಹಂಚಿ ಏಸುಕ್ರಿಸ್ತನ ಜನನ ದಿನದ ಸಂಭ್ರಮ ಆಚರಿಸಲಾಗುತ್ತಿದೆ.
ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಖಾತೆ ಎಕ್ಸ್ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ್ದಾರೆ. ಎಲ್ಲಾ ಕ್ರಿಸ್ ಮಸ್ ಬಾಂಧವರಿಗೆ ಶಾಂತಿ, ಸಮಾಧಾನದ ಸಂಕೇತವಾದ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು ಎಂದು ಶುಭಾಶಯ ಸಂದೇಶ ಬರೆದಿದ್ದಾರೆ.
ಪ್ರಧಾನಿ ಮಾತ್ರವಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ರಾಜಕೀಯ ನಾಯಕರೂ ಕೂಡಾ ಎಕ್ಸ್ ಖಾತೆ ಮೂಲಕ ಕ್ರಿಸ್ ಮಸ್ ಹಬ್ಬದ ಶುಭಾಶಯ ಹೇಳಿದ್ದಾರೆ.