Select Your Language

Notifications

webdunia
webdunia
webdunia
Sunday, 20 April 2025
webdunia

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಷಯ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ
ಬೆಂಗಳೂರು , ಗುರುವಾರ, 1 ನವೆಂಬರ್ 2018 (10:17 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಧಾನಿ ಮೋದಿ ಕರ್ನಾಟಕದ ಜನತೆಗೆ ಟ್ವೀಟ್ ಮಾಡಿದ್ದು, ಕನ್ನಡದಲ್ಲೇ ಶುಭಾಷಯ ಕೋರಿದ್ದಾರೆ.

‘ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ಶುಭಾಷಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಶುಭಾಷಯ ಕೋರಿದ್ದಾರೆ.

ಇದಲ್ಲದೆ ಇಂದು ರಾಜ್ಯೋತ್ಸವ ಆಚರಿಸುತ್ತಿರುವ ಕೇರಳ, ಹರಿಯಾಣ, ಮಧ್ಯಪ್ರದೇಶ ರಾಜ್ಯಗಳಿಗೂ ಪ್ರಧಾನಿ ಆಯಾ ರಾಜ್ಯಗಳ ಭಾಷೆಯಲ್ಲೇ ಟ್ವೀಟ್ ಸಂದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ರಾಮನಗರ ಚುನಾವಣಾ ಕಣದಲ್ಲಿ ಬಿಗ್ ಟ್ವಿಸ್ಟ್! ಬಿಜೆಪಿಗೆ ಶಾಕ್!