ಬಿಜೆಪಿ ಪಕ್ಷದ ಸಂಸದರು, ಶಾಸಕರು ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು (ನವೆಂಬರ್ 08-ಡಿಸೆಂಬರ್ 31 ರವರೆಗಿನ) ಜನೆವರಿ 01 ರೊಳಗಾಗಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ.
ದೇಶದ ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಮೊದಲು ಬಿಜೆಪಿ ಪಕ್ಷ ಪಾಲಿಸಲಿ ಎನ್ನುವುದು ಪ್ರಧಾನಿ ಮೋದಿ ನಿಲುವಾಗಿದೆ.
500 ಮತ್ತು 1000 ರೂಪಾಯಿ ನೋಟು ನಿಷೇಧ ಜಾರಿಗೊಳಿಸುವ ಸಂದರ್ಭದಲ್ಲಿ ಬಿಜೆಪಿ ಮುಖಂಡರಿಗೆ ಮಾಹಿತಿ ಸೋರಿಕೆಯಾಗಿತ್ತು ಎನ್ನುವ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಕೂಡಾ ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಡವರ ಕಲ್ಯಾಣದತ್ತ ಗಮನಹರಿಸುವುದು ಅಗತ್ಯವಾಗಿದೆ. ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಮೂಲಭೂತ ಸೌಕರ್ಯಗಳಾದ ನೀರು, ವಿದ್ಯುತ್, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.