Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ನೇತಾಜಿ ಸುಭಾಷ್ ಚಂದ್ರ ಭೋಸ್‌ರಂತೆ

Webdunia
ಶನಿವಾರ, 26 ಮಾರ್ಚ್ 2016 (15:14 IST)
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರಾಳಿಯಾಗಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಚಂದ್ರ ಕುಮಾರ್ ಭೋಸ್, ಪ್ರಧಾನಿ ಮೋದಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಭೋಸ್‌ರಂತೆ ಎಂದು ಹೊಗಳಿದ್ದಾರೆ. 
 
ಬಿಜೆಪಿ ಅಭ್ಯರ್ಥಿ ಚಂದ್ರ ಕುಮಾರ್ ಭೋಸ್ ನೇತಾಜಿಯವರ ಮೊಮ್ಮಗರಾಗಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಭೋಸ್, ಪ್ರಧಾನಿ ಮೋದಿಯವರಲ್ಲಿ ನೇತಾಜಿಯವರಂತಹ ಕೆಲ ಗುಣಗಳಿವೆ. ಯಾವೊಬ್ಬ ರಾಜಕಾರಣಿಯನ್ನು ನೇತಾಜಿಯವರಿಗೆ ಹೋಲಿಸುವುದು ಸರಿಯಲ್ಲ ಎನ್ನುವುದು ನನಗೆ ತಿಳಿದಿದೆ. ಆದರೆ, ಮೋದಿಯವರಲ್ಲಿ ನೇತಾಜಿಯವರ ಹೋಲಿಕೆಯಿದೆ ಎಂದು ಹೇಳಲು ನನಗೆ ನಾಚಿಕೆಯೆನಿಸುವುದಿಲ್ಲ ಎಂದು ಹೇಳಿದ್ದಾರೆ.
 
ನನಗೆ ಪ್ರಧಾನಿ ಮೋದಿಯವರ ನಿರ್ಧಾರಗಳು, ಉದ್ದೇಶಗಳು ಮತ್ತು ತೀರ್ಮಾನಗಳಿಂದ ತುಂಬಾ ಪ್ರಭಾವಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.
 
ನೇತಾಜಿಯವರ ಸಿದ್ಧಾಂತಗಳನ್ನು ಜನತೆಗೆ ತಲುಪಿಸಬೇಕು ಎನ್ನುವುದು ನನ್ನ ಬಯಕೆ. ಅದು ಕೇವಲ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಮಾತ್ರ ಸಾಧ್ಯ ಎಂದರು.
 
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಎದುರಾಳಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ಬಲಿಪಶುವಾದಂತೆ ಎಂದು ನೀವು ಭಾವಿಸಿಲ್ಲವಾ? ಎನ್ನುವ ಸುದ್ದಿಗಾರರು ಪ್ರಶ್ನೆಗೆ ಉತ್ತರಿಸಿದ ಅವರು, ಜನಪ್ರಿಯ ನಾಯಕರ ವಿರುದ್ಧ ಸ್ಪರ್ಧಿಸುವುದು ಸದಾ ಸ್ಪೂರ್ತಿ ಕೊಡುತ್ತದೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments