ನಾಳೆ ಸಚಿವ ಸಂಪುಟ ಪುನಾರಚನೆ- ಸಂಭಾವ್ಯರ ಪಟ್ಟಿ

Webdunia
ಸೋಮವಾರ, 4 ಜುಲೈ 2016 (15:13 IST)
ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನಾರಚನೆ ನಾಳೆ ನಡೆಯಲಿದ್ದು, ಇದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ. ಬುಧವಾರ ಪ್ರಧಾನಿ ನಾಲ್ಕು ದೇಶಗಳ ಪ್ರವಾಸ ಹೊರಡಲಿದ್ದು ಅದಕ್ಕೂ ಒಂದು ದಿನ ಮೊದಲು ಸಂಪುಟ ಸರ್ಜರಿಯನ್ನು ನೆರವೇರಿಸಲಿದ್ದಾರೆ.

ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂದು ಸರ್ಕಾರ ಮುಖ್ಯ ವಕ್ತಾರ ಫ್ರಾಂಕ್ ನೊರೊನ್ಹಾ ಟ್ವೀಟ್ ಮಾಡಿದ್ದಾರೆ.
 
ಜೂನ್ 30 ರಂದು ಸಚಿವ ಸಂಪುಟದ ಜತೆ ನಾಲ್ಕು ಗಂಟೆಗಳ ಕಾಲ ನಡೆಸಿದ ದೀರ್ಘ ಅವಧಿಯ ಸಭೆಯಲ್ಲಿ ಪ್ರಧಾನಿ ಬಜೆಟ್ ಅನುದಾನಗಳನ್ನು ಬುದ್ಧಿವಂತಿಕೆಯಿಂದ ಬಳಸಲಾಗಿದೆಯೇ? ಕಳೆದ ಎರಡು ವರ್ಷಗಳಲ್ಲಿ ಯೋಜನೆಯ ಅನುಷ್ಠಾನ, ಯೋಜನೆಗಳ ಲಾಭ ಜನರಿಗೆ ತಲುಪಿಸಲಾಗಿದೆಯೆ?, ಪ್ರತಿ ಸಚಿವಾಲಯ ಅನುಷ್ಠಾನಗೊಳಿಸಿರುವ ಯೋಜನೆಗಳ ಸಂಖ್ಯೆ-ಇವೇ ಮೊದಲಾದ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸಚಿವರ ಕಾರ್ಯಕ್ಷಮತೆಯನ್ನು ಪರೀಕ್ಷಿಸಿದ್ದರು. ಅದರ ಆಧಾರದ ಮೇಲೆ ಕಳಪೆ ಪ್ರದರ್ಶನ ತೋರಿರುವ  ಸಚಿವರನ್ನು ಸಂಪುಟದಿಂದ ಕೈಬಿಟ್ಟು ಅವರ ಸ್ಥಾನಕ್ಕೆ ಹೊಸಬರನ್ನು ತುಂಬಿಕೊಳ್ಳಲು ಮೋದಿ ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ. 
 
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್ ರಾಜ್ಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುವುದು ಖಚಿತವೆನ್ನಲಾಗುತ್ತಿದೆ. ಆದರೆ ಮುಖ್ಯ ಖಾತೆಗಳಾದ ವಿತ್ತ, ಗೃಹ, ವಿದೇಶಾಂಗ ವ್ಯವಹಾರಗಳಲ್ಲಿ ಬದಲಾವಣೆಯಾಗುವುದಿಲ್ಲ ಎಂದು ಹೇಳಲಾಗುತ್ತಿದೆ. 
 
ಕರ್ನಾಟಕದಿಂದ ಯಾರು ಹೊರ ಹೋಗುತ್ತಾರೆ, ಯಾರು ಒಳಬರುತ್ತಾರೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೆ ಕಾನೂನು ಸಚಿವ ಡಿ.ವಿ. ಸದಾನಂದ ಗೌಡರಿಗೆ ಕೋಕ್ ನೀಡುತ್ತಾರೆಂದು ಹೇಳಲಾಗುತ್ತಿದ್ದು ಹಿರಿಯ ನಾಯಕ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಅವರು ಹಠಾತ್ ಆಗಿ ದೆಹಲಿಗೆ ಪಯಣಿಸಿರುವುದು ಈ ಅನುಮಾನಗಳಿಗೆ ಪುಷ್ಠಿ ನೀಡಿದೆ. 
 
ಸಂಭಾವ್ಯ ಹೊಸ ಸಚಿವರ ಪಟ್ಟಿ: ಶಿವಸೇನೆಯ ಅನಿಲ್ ದೇಸಾಯಿ, ಆರ್‌ಪಿಐನ ರಾಮ್ ದಾಸ್ ಅಠಾವಳೆ, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ, ಸಹರಣಾಪುರದ ಸಂಸದ ರಾಘವ್ ಲಖನ್‌ಪಾಲ್, ಉತ್ತರ ಪ್ರದೇಶದ ಅಪ್ನಾ ದಳ ನಾಯಕಿ  ಅನುಪ್ರಿಯಾ ಪಟೇಲ್, ಮಹೇಂದ್ರ ನಾಥ್ ಪಾಂಡೆ, ಬಿಜೆಪಿಯ ಬಿಕಾನೇರ್ ಸಂಸದ ಅರ್ಜುನ್ ರಾಮ್ ಮೇಘವಾಲ್, ಗುಜರಾತ್ ಬಿಜೆಪಿ ನಾಯಕ ಪುರುಷೋತ್ತಮ ರುಪಾಲಾ, ಡಾರ್ಜಿಲಿಂಗ್ ಬಿಜೆಪಿ ಸಂಸದ ಎಸ್ಎಸ್ ಅಹ್ಲುವಾಲಿಯಾ, ಅಲ್ಮೋರಾದ ಸಂಸದ(ಬಿಜೆಪಿ) ಅಜಯ್ ತಮ್ತಾ, ಕರ್ನಾಟಕದ ಬಿಜಾಪುರದ ಸಂಸದ ರಮೇಶ್ ಜಿಗಜಿಗಣಗಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments