Select Your Language

Notifications

webdunia
webdunia
webdunia
webdunia

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ

PM Modi

Krishnaveni K

ಬೆಂಗಳೂರು , ಶನಿವಾರ, 10 ಆಗಸ್ಟ್ 2024 (09:12 IST)
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜನಪ್ರಿಯ ಯೋಜನೆಗಳಲ್ಲಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಕಡಿಮೆ ದರದಲ್ಲಿ ಸಾಲ ಸೌಲಭ್ಯ ಸಿಗುತ್ತದೆ. ಇದಕ್ಕೆ ಅರ್ಜಿ ಹಾಕುವುದು ಹೇಗೆ, ಯಾವೆಲ್ಲಾ ದಾಖಲೆ ಬೇಕು ಇಲ್ಲಿದೆ ವಿವರ.

ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಮೋದಿ ಸರ್ಕಾರ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ಮಾಡಲು ಅನುಕೂಲವಾಗಲಿದೆ. ಕುಶಲಕರ್ಮಿ ವರ್ಗದವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಿಂದ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಕಡಿಮೆ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ. 

ಮೊದಲ ಕಂತಿನಲ್ಲಿ ಶೇ.5 ರಷ್ಟು ಬಡ್ಡಿದರದಲ್ಲಿ 1 ಲಕ್ಷ ರೂ. ಸಾಲ ನೀಡಲಾಗುತ್ತದೆ. ಇದನ್ನು ಪಾವತಿಸಲು 18 ತಿಂಗಳ ಸಮಯ ನೀಡಲಾಗುತ್ತದೆ. ಎರಡನೇ ಕಂತಿನಲ್ಲಿ 2 ಲಕ್ಷ ಸಾಲ ಸೇರಿದಂತೆ ಒಟ್ಟು 3 ಲಕ್ಷ ರೂ. ಸಾಲ ನೀಡಲಾಗುತ್ತದೆ. ಈ ಯೋಜನೆಯಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಕುಟುಂಬಗಳಿಗೆ ಅನುಕೂಲವಾಗುತ್ತದೆ. ಆದರೆ ಈ ಯೋಜನೆ ಪಡೆಯಲು ಕೇಂದ್ರ ಸರ್ಕಾರದ ಇತರೆ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು.

ಯಾವೆಲ್ಲಾ ದಾಖಲೆಗಳು ಬೇಕು
ಪಾಸ್ ಪೋರ್ಟ್ ಗಾತ್ರದ ಫೋಟೋಗಳು
ಆಧಾರ್ ಕಾರ್ಡ್
ಪಡಿತರ ಚೀಟಿ
ಪ್ಯಾನ್ ಕಾರ್ಡ್
ಮೊಬೈಲ್ ಸಂಖ್ಯೆ
ವಾಸಸ್ಥಳ ಮತ್ತು ಜಾತಿ ಪ್ರಮಾಣ ಪತ್ರ
ಬ್ಯಾಂಕ್ ಖಾತೆ, ಪಾಸ್ಪುಕ್ ವಿವರಗಳು
ಇವಿಷ್ಟು ದಾಖಲೆಗಳೊಂದಿಗೆ https://pmvishwakarma.gov.in/ ಎಂಬ ವೆಬ್ ಸೈಟ್ ನಲ್ಲಿ ಆನ್ ಲೈನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಗೆ ಆಯ್ಕೆಯಾದವರಿಗೆ ಮೂಲಭೂತ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಒಂದು ವಾರ ಕಾಯಬೇಕಾಗುತ್ತದೆ. ಸುಧಾರಿತ ಕೌಶಲ್ಯಕ್ಕಾಗಿ 15 ದಿನಗಳ ತರಬೇತಿ ನೀಡಲಾಗುತ್ತದೆ. ಈ ತರಬೇತಿ ಸಮಯದಲ್ಲಿ 500 ರೂ. ಭತ್ಯೆ ನೀಡಲಾಗುತ್ತದೆ.  ತರಬೇತಿ ಮುಗಿದ ನಂತರ ಟೂಲ್ ಕಿಟ್ ಗಾಗಿ 15,000 ರೂ. ನೆರವು ನೀಡಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗಳಿಗೆ ಪ್ರತ್ಯೇಕ ಕ್ಯಾಬಿನ್ ನೀಡುವಂತೆ ಧಮ್ಕಿ: ಪೂಜಾ ಖೇಡ್ಕರ್ ತಂದೆ ವಿರುದ್ಧ ದೂರು