Webdunia - Bharat's app for daily news and videos

Install App

ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿ ಕಚೇರಿ ಸ್ಪಂದಿಸಲಿಲ್ಲ: ಮ್ಯಾಗ್‌ಸೆಸ್ಸೆ ಪ್ರಶಸ್ತಿ ವಿಜೇತ

Webdunia
ಬುಧವಾರ, 29 ಜುಲೈ 2015 (15:27 IST)
ಹರಿಯಾಣಾದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆ ಹೋರಾಟಕ್ಕೆ ಪ್ರಧಾನಮಂತ್ರಿ ಕಚೇರಿ ಬೆಂಬಲಿಸುತ್ತಿಲ್ಲ ಎಂದು ರಾಮನ್ ಮ್ಯಾಗ್‌ಸೆಸ್ಸೆ ಪ್ರಶಸ್ತಿ ವಿಜೇತ ಸಂಜೀವ್ ಚತುರ್ವೇದಿ ಆರೋಪಿಸಿದ್ದಾರೆ.
 
ಮ್ಯಾಗ್‌ಸೆಸ್ಸೆ ಫೌಂಡೇಶನ್‌ನಿಂದ 2015ರ ಮ್ಯಾಗ್‌ಸೆಸ್ಸೆ ಪ್ರಶಸ್ತಿ ಘೋಷಣೆಯಾದ ನಂತರ ಮಾತನಾಡಿದ ಚತುರ್ವೇದಿ, ಭ್ರಷ್ಟಾಚಾರ ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪ್ರಧಾನಮಂತ್ರಿ ಕಚೇರಿ ಹಿಂದೇಟು ಹಾಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಅಂಶು ಗುಪ್ತಾ ಅವರಿಗೆ ಕೂಡಾ ಮ್ಯಾಗ್‌ಸೆಸ್ಸೆ ಪ್ರಶಸ್ತಿ ದೊರೆತಿದೆ.
 
ಭ್ರಷ್ಟಾಚಾರ ಮತ್ತು ಭ್ರಷ್ಟ ಅಧಿಕಾರಿಗಳ ಬಗ್ಗೆ ಶೂನ್ಯ ತಾಳ್ಮೆಯನ್ನು ಹೊಂದಿರಬೇಕೇ ಹೊರತು ಪ್ರಾಮಾಣಿಕ ಅಧಿಕಾರಿಗಳ ಬಗ್ಗೆಯಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಏಮ್ಸ್ ಮತ್ತು ಹರಿಯಾಣಾದಲ್ಲಿ ಭ್ರಷ್ಟಾಚಾರದ ವಿರುದ್ಧ ನಾನು ಹೋರಾಡುವಾಗ ಹಲವಾರು ಸುಳ್ಳು ಆರೋಪಗಳನ್ನು ಹರೊರಿಸಲಾಯಿತು
 
ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದಂತೆ ನಾನು ಭ್ರಷ್ಟಾಚಾರ ಮಾಡುವುದಿಲ್ಲ ಇತರರಿಗೆ ಮಾಡಲು ಬಿಡುವುದಿಲ್ಲ ಎನ್ನುವ ಘೋಷಣೆಯನ್ನು ಗಮನದಲ್ಲಿಟ್ಟುಕೊಂಡು ಭ್ರಷ್ಟಾಚಾರದ ವಿರುದ್ಧ ಹೋರಾಡಿರುವುದು ನನ್ನ ತಪ್ಪಾಗಿದೆ. ಪ್ರಧಾನಿ ಕಚೇರಿಯ ಅಧಿಕಾರಿಗಳೇ ಭ್ರಷ್ಟಾಚಾರದ ಬಗ್ಗೆ ಮೌನವಾಗಿದ್ದಾರೆ ಎಂದು ಸಂಜೀವ್ ಚತುರ್ವೇದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments