Publish Date: Wed, 20 Jan 2021 (10:38 IST)
Updated Date: Wed, 20 Jan 2021 (10:40 IST)
ಮಧುರೈ : ನರಿಮೇಡು ಪ್ರದೇಶದಲ್ಲಿ ಆಯುರ್ವೇದದ ಮಸಾಜ್ ಕೇಂದ್ರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಆಯುರ್ವೇದದ ಮಸಾಜ್ ಕೇಂದ್ರದ ಮೇಲೆ ದಾಳಿ ಮಾಡಿದ ತಲ್ಲಕುಲಂ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಹಾಗೇ ಇಬ್ಬರು ಮಹಿಳೆಯರನ್ನು ಸೇರಿಸಿ ನಾಲ್ವರನ್ನು ಪೊಲೀಸರು ಬಂಧಿಸಿ ಉಳಿದ ಮೂವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.