ಉತ್ತರಪ್ರದೇಶ : ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಟೆಲಿಗ್ರಾಂ ಗ್ರೂಪ್ ಮೂಲಕ ಸೋರಿಕೆಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪರೀಕ್ಷಾ ಅಭ್ಯರ್ಥಿಗಳು ಈ ಕುರಿತು ಮರು ಪರೀಕ್ಷೆಗಾಗಿ ಆಗ್ರಹಿಸಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ. ಲಖ್ನೋ ಜಿಲ್ಲೆಯ ಎಕೋ ಗಾರ್ಡನ್ ನಲ್ಲಿ ಒಗ್ಗೂಡಿರುವ ಅಭ್ಯರ್ಥಿಗಳು ಮರು ಪರೀಕ್ಷೆ ನಡೆಸುವಂತೆ ಹಾಗೂ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.