Select Your Language

Notifications

webdunia
webdunia
webdunia
Monday, 14 April 2025
webdunia

ಕೌಟುಂಬಿಕ ವಿವಾದಿಂದ ಬೇಸತ್ತು ಕಾನ್ ಸ್ಟೇಬಲ್ ಆತ್ಮಹತ್ಯೆ

ಪೊಲೀಸ್
ಬೆಂಗಳೂರು , ಬುಧವಾರ, 17 ನವೆಂಬರ್ 2021 (11:35 IST)
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಮನನೊಂದು ಕಾನ್ ಸ್ಟೇಬಲ್ ಒಬ್ಬರು ನೇಣು  ಬಿಗಿದುಕೊಂಡು ಆತ್ಮಹತ್ಯೆ ಮಾಡಿದ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕ ಬಳ್ಳಾಪುರ ಮೂಲದ ರಂಗನಾಥ್ ಕುಮಾರ್ (34) ಆತ್ಮಹತ್ಯೆ ಮಾಡಿಕೊಂಡವರು. ಮೆಜೆಸ್ಟಿಕ್ ಬಳಿಯ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದ ರಂಗನಾಥ್ ಇಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬದಲ್ಲಿ ಹಲವು ಸಮಸ್ಯೆಗಳಿತ್ತು. ತಾಯಿ, ತಂಗಿ, ಸಹೋದರನ ಪತ್ನಿ ಕೆಲವು ಸಮಯದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ಯಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನು ರೇಪ್ ಮಾಡಿ ಕೊಂದ ನೀಚ ತಂದೆ