Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿಗೆ ನೋಟಿಸ್ ನೀಡಲು 3 ಗಂಟೆ ಕಾದ ಪೊಲೀಸರು?

ರಾಹುಲ್ ಗಾಂಧಿಗೆ ನೋಟಿಸ್ ನೀಡಲು 3 ಗಂಟೆ ಕಾದ ಪೊಲೀಸರು?
ನವದೆಹಲಿ , ಶನಿವಾರ, 18 ಮಾರ್ಚ್ 2023 (10:44 IST)
ನವದೆಹಲಿ : ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಪ್ರಸ್ತಾಪಿಸಿದ್ದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಕೋರಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೋಟಿಸ್ ನೀಡಲು ಹೋದಾಗ ದೆಹಲಿ ಪೊಲೀಸರು 3 ಗಂಟೆಗಳ ಕಾಲ ಕಾದ ಘಟನೆ ನಡೆದಿದೆ.

ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ಕಿರುಕುಳದ ಸಂತ್ರಸ್ತರ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು, ನಿಮ್ಮನ್ನು ಸಂಪರ್ಕಿಸಿದ ಸಂತ್ರಸ್ತರ ಬಗ್ಗೆ ಮಾಹಿತಿ ನೀಡಿ,

ನಾವು ಅವರಿಗೆ ಭದ್ರತೆಯನ್ನು ನೀಡುತ್ತೇವೆ ಎನ್ನುವ ನೋಟಿಸ್ ನೀಡಲು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. 3 ಗಂಟೆಗಳ ಕಾಲ ಕಾಯುತ್ತಿದ್ದರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಂಠಪೂರ್ತಿ ಕುಡಿದು ತನ್ನ ಮದುವೆಯನ್ನೇ ಮರೆತ !