Webdunia - Bharat's app for daily news and videos

Install App

ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು : ಸುಪ್ರೀಂ

Webdunia
ಬುಧವಾರ, 2 ಆಗಸ್ಟ್ 2023 (08:06 IST)
ನವದೆಹಲಿ : ಮಣಿಪುರದಲ್ಲಿನ ಹಿಂಸಾಚಾರ, ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು ಎಂದು ಸುಪ್ರೀಂಕೋರ್ಟ್ ಆಕ್ರೋಶ ಹೊರಹಾಕಿದೆ.
 
ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಪೊಲೀಸ್ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ 6000 ಅಧಿಕ ಎಫ್ಐಆರ್ ಗಳು ದಾಖಲಾಗಿವೆ, ಆದರೆ ಒಂದೆರಡು ಪ್ರಕರಣಗಳಲ್ಲಿ ಮಾತ್ರ ಆರೋಪಿಗಳ ಬಂಧನವಾಗಿದೆ. ತನಿಖೆ ನಿಧಾನವಾಗಿ ನಡೆಯುತ್ತಿದೆ. ಘಟನೆ ನಡೆದು ಬಹಳಷ್ಟು ದಿನಗಳ ಬಳಿಕ ಹೇಳಿಕೆ ಪಡೆಯಲಾಗಿದೆ. ಇದರಿಂದ ಕಾನೂನು ಮತ್ತು ಆಡಳಿತ ಯಂತ್ರ ನಿಷ್ಕ್ರಿಯವಾಗಿತ್ತು ಎನ್ನುವುದು ಗೊತ್ತಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡದ ಕಾರಣ ಆರೋಪಿಗಳನ್ನು ಬಂಧಿಸಿಲ್ಲ ಎಂದುಕೊಂಡರೂ, ಎರಡು ತಿಂಗಳಿಂದ ಎಫ್ಐಆರ್ ಯಾಕೆ ದಾಖಲಿಸಿಲ್ಲ ಎಂದು ಸಿಜೆಐ ಚಂದ್ರಚೂಡ್ ಪ್ರಶ್ನಿಸಿದರು.

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನೆಲದ ಪರಿಸ್ಥಿತಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು. ವೀಡಿಯೋ ಪ್ರಕರಣದಲ್ಲಿ ಅಪ್ರಾಪ್ತ ಆರೋಪಿ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದೆ. ಸಂತ್ರಸ್ತ ಮಹಿಳೆಯರಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಹೇಳಿಕೆ ಪಡೆದಿದ್ದಾರೆ ಎಂದು ವಿವರಿಸಿದರು. ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದೆ ಮತ್ತು ಅದಕ್ಕಾಗಿಯೇ ನಾವು ಸಿಬಿಐ ತನಿಖೆಗೆ ಆದೇಶಿಸಿದ್ದೇವೆ. ಇದನ್ನು ನ್ಯಾಯಾಲಯವು ಮೇಲ್ವಿಚಾರಣೆ ಮಾಡಲಿ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments