Webdunia - Bharat's app for daily news and videos

Install App

ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಗಲಿಕೆಗೆ ರಾಜಕೀಯ ಗಣ್ಯರ ಸಂತಾಪ

Webdunia
ಬುಧವಾರ, 7 ಆಗಸ್ಟ್ 2019 (06:48 IST)
ನವದೆಹಲಿ : ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​​ ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಗಲಿದ ನಾಯಕಿಗೆ  ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.




‘ಭಾರತೀಯ ರಾಜಕಾರಣದಲ್ಲಿ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ.ಸಾರ್ವಜನಿಕ ಸೇವೆಗಾಗಿ ಮತ್ತು ಬಡವರ ಜೀವನವನ್ನು ಉತ್ತಮಗೊಳಿಸಲು ತನ್ನ ಜೀವನವನ್ನು ಮುಡಿಪಾಗಿಟ್ಟ ಗಮನಾರ್ಹ ನಾಯಕಿಯ ನಿಧನಕ್ಕೆ ಭಾರತ ದುಃಖಿಸುತ್ತಿದೆ.’ ಎಂದು ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.


‘ಆಕೆ ಅತೀ ಚಿಕ್ಕ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವೆ ಆಗಿ ಉತ್ತಮ ಕಾರ್ಯ ನಿರ್ವಹಿಸಸಿದ್ದರು. ಈ ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದರು. ಸುಷ್ಮಾ ನಿಧನದಿಂದ ನಮ್ಮ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣು ಮಗಳನ್ನ ಕಳೆದು ಕೊಂಡಿದ್ದೇವೆ. ಅವರ ನಿದನದಿಂದ ರಾಷ್ಟ್ರಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ' ಎಂದು ಮಾಜಿ ಪ್ರಧಾನಿ ಎಚ್​. ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ.


ಸಿಎಂ ಯಡಿಯೂರಪ್ಪ ಅವರು ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಸುಷ್ಮಾ ಸ್ವರಾಜ್ ಅವರ ಸೇವೆಯನ್ನು ದೇಶ ನೆನಪಿಟ್ಟುಕೊಳ್ಳುತ್ತದೆ. ವಿದೇಶಾಂಗ ಮಂತ್ರಿಯಾಗಿ ಅವರು ಮಾಡಿದ ಕಾರ್ಯ ಎಂದಿಗೂ ನೆನಪಿನಲ್ಲಿ ಉಳಿಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.


ಸ್ವಸಾಮಾರ್ಥ್ಯದಿಂದ ರಾಜಕೀಯವಾಗಿ ಎತ್ತರೆತ್ತರಕ್ಕೆ ಬೆಳೆಯುತ್ತಿದ್ದಾಗಲೇ ಅವರ ಬದುಕಿನ ಪಯಣ ಹಠಾತ್ತನೆ ಕೊನೆಗೊಂಡಿದ್ದು ವಿಷಾದನೀಯ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments