Select Your Language

Notifications

webdunia
webdunia
webdunia
webdunia

ಗೋವಾದಲ್ಲಿ ಸೆಕ್ಸ್ ಟೂರಿಸಂಗೆ ರಾಜಕೀಯ ಪಕ್ಷಗಳ ಬೆಂಬಲ: ಕೇಜ್ರಿವಾಲ್

ಗೋವಾದಲ್ಲಿ ಸೆಕ್ಸ್ ಟೂರಿಸಂಗೆ ರಾಜಕೀಯ ಪಕ್ಷಗಳ ಬೆಂಬಲ: ಕೇಜ್ರಿವಾಲ್
ಪಣಜಿ , ಬುಧವಾರ, 29 ಜೂನ್ 2016 (20:25 IST)
ಗೋವಾ ರಾಜ್ಯದಲ್ಲಿ ಸರಕಾರ ಸೇರಿದಂತೆ ರಾಜಕೀಯ ಪಕ್ಷಗಳು ಸೆಕ್ಸ್, ಡ್ರಗ್ಸ್ ಮತ್ತು ವೇಶ್ಯಾವಾಟಿಕೆಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ರಾಜ್ಯಕ್ಕೆ ಅಪಖ್ಯಾತಿ ಎದುರಾಗಿದೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. 
 
ಕರಾವಳಿ ತೀರದ ರಾಜ್ಯದ ಗೋವಾದಲ್ಲಿ ಇಂದು ಸಣ್ಣ ಹೋಟೆಲ್ ಮಾಲೀಕರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಕೆಜ್ರಿವಾಲ್ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
 
ಗೋವಾದಲ್ಲಿ  ಸೆಕ್ಸ್, ಡ್ರಗ್ಸ್ ಮತ್ತು ವೇಶ್ಯಾವಾಟಿಕೆಗೆ ಪ್ರಚೋದನೆ ನೀಡುವಂತಹ ಕೃತ್ಯಗಳು ನಡೆಯುತ್ತಿರುವುದರಿಂದ ಪ್ರವಾಸೋದ್ಯಮಕ್ಕೆ ಗರಬಡಿದಿದೆ. ರಾಜಕೀಯ ಪಕ್ಷಗಳು ಇಂತಹ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವುದರಿಂದ ನಿಲ್ಲಿಸಲು ಸಾಧ್ಯವಿಲ್ಲ ಎಂದರು.
 
ಗೋವಾ ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷ ಚುನಾವಣೆಗೆ ಸ್ಪರ್ಧಿಸಲು ಸಿದ್ದತೆ ನಡೆಸಿದೆ. ವರ್ಷಧ ಆರಂಭದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸುವುದಾಗಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

7ನೇ ವೇತನ ಶಿಫಾರಸ್ಸು, ಜಿಎಸ್‌ಟಿ ನಿರೀಕ್ಷೆ: ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ