ಅನಂತಕುಮಾರ್ ನಿಧನದ ಬಗ್ಗೆ ಗಣ್ಯರು ಹೇಳಿದ್ದೇನು?

Webdunia
ಸೋಮವಾರ, 12 ನವೆಂಬರ್ 2018 (09:10 IST)
ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ರಾಜ್ಯ, ರಾಷ್ಟ್ರ ರಾಜಕಾರಣದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. 

ತಮ್ಮ ಜತೆ ಸಂಸತ್ ಕೆಲಸ ಕಾರ್ಯಗಳಲ್ಲಿ ನಿಕಟವರ್ತಿಯಾಗಿ ಕೆಲಸ ಮಾಡುತ್ತಿದ್ದ ಅನಂತ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಅನಂತ ಕುಮಾರ್ ನಿಧನದಿಂದ ಓರ್ವ ಸಜ್ಜನ, ರಾಜಕರಾಣಿಯನ್ನು ದೇಶ, ಕರ್ನಾಟಕ ರಾಜಕಾರಣ ಕಳೆದುಕೊಂಡಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸರಣಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಓರ್ವ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಅನಂತ ಕುಮಾರ್ ರಾಜ್ಯ ಮತ್ತು ಕೇಂದ್ರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿದ್ದರು ಎಂದು ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ನನ್ನ ಸ್ನೇಹಿತನನ್ನು ಕಳೆದುಕೊಂಡೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ. ಸಂಸದ ಪ್ರಹ್ಲಾದ್ ಜೋಶಿ ಅನಂತ ಕುಮಾರ್ ನಿಧನದ ಬಗ್ಗೆ ಮಾತನಾಡುತ್ತಾ ಕಣ್ಣೀರು ಮಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments