Select Your Language

Notifications

webdunia
webdunia
webdunia
webdunia

ನಕಲಿ ದಾಖಲೆಗೆ ಪೂಜಾ ಖೇಡ್ಕರ್ ತಲೆದಂಡ: ಸೇವೆಯಿಂದಲೇ ಕಿತ್ತೆಸೆದ ಕೇಂದ್ರ

IAS Probationary Officer Pooja Khedkar

Sampriya

ನವದೆಹಲಿ , ಭಾನುವಾರ, 8 ಸೆಪ್ಟಂಬರ್ 2024 (10:03 IST)
Photo Courtesy X
ನವದೆಹಲಿ: ವಿವಾದಿತ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರವು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಆಡಳಿತ ಸೇವೆಯಿಂದ ವಜಾಗೊಳಿಸಲಾಗಿದೆ.

ನಕಲಿ ದಾಖಲೆ ನೀಡಿದ ಆರೋಪದ ಮೇಲೆ ಪೂಜಾ ಖೇಡ್ಕರ್ ಅವರ ನೇಮಕಾತಿ ಆದೇಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರದ್ದುಗೊಳಿಸಿದ ತಿಂಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು.

ಪುಣೆಯಲ್ಲಿ ಪ್ರೊಬೇಷನರಿ ತರಬೇತಿಯಲ್ಲಿದ್ದ ವೇಳೆ ಪೂಜಾ ತಮ್ಮ ಅಧಿಕಾರ ಹಾಗೂ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಸಹ ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿತ್ತು.

ನಕಲಿ ಅಂಗವೈಕಲ್ಯ ವೈದ್ಯಕೀಯ ಪ್ರಮಾಣಪತ್ರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಏಮ್ಸ್ ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ನಾನು ತಯಾರಿದ್ದೇನೆ ಎಂದು ದೆಹಲಿ ಹೈಕೋರ್ಟ್‌ಗೆ ಪೂಜಾ ಖೇಡ್ಕರ್ ತಿಳಿಸಿದ್ದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಹಬ್ಬಕ್ಕೆ ಮಾತ್ರವಲ್ಲ, ಇಫ್ತಾರ್ ಕೂಟಕ್ಕೂ ರೂಲ್ಸ್ ಮಾಡಿ