Publish Date: Wed, 29 Mar 2023 (10:22 IST)
Updated Date: Wed, 29 Mar 2023 (10:23 IST)
ಮುಂಬೈ : ತನ್ನ ಮನೆಯಲ್ಲಿ ವಿದ್ಯುತ್ ಕಡಿತಗೊಂಡಿದ್ದರಿಂದ ಕೋಪಗೊಂಡ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮನೆಗೆ ಕರೆ ಮಾಡಿ ಇಡಲಾಗಿದೆ ಎಂದು ಬೆದರಿಕೆ ಹಾಕಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬ ಕರೆ ಮಾಡಿ ದೇವೇಂದ್ರ ಫಡ್ನವಿಸ್ ಮನೆಯ ಹೊರಗೆ ಬಾಂಬ್ ಇಟ್ಟಿರುವುದಾಗಿ ತಿಳಿಸಿ ಏಕಾಏಕಿ ಸಂಪರ್ಕ ಕಡಿತಗೊಳಿಸಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕರೆ ಮಾಡಿದ 30 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.