Publish Date: Thu, 19 May 2022 (22:14 IST)
Updated Date: Thu, 19 May 2022 (22:18 IST)
ಖ್ಯಾತ ಬಹುಭಾಷಾ ನಟ, ರಾಜಕಾರಣಿ, ನಿರ್ದೇಶಕ, ನಿರ್ಮಾಪಕ ಹಾಗೂ ನಿರೂಪಕ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಹೊಸ ವೇಷ ಧರಿಸಿರುವ ಫೋಟೋವನ್ನು ಪೋಸ್ಟ್ ಮಾಡಿ ಟ್ವೀಟ್ ಮೂಲಕ ಪ್ರಧಾನಿ ಮೋದಿಯನ್ನು ಅಣಕಿಸಿದ್ದಾರೆ.ಸ್ಥಳೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಕ್ಯಾಮೆರಾಗೆ ಪೋಸ್ ನೀಡಿರುವ ಎರಡು ಫೋಟೋಗಳನ್ನು ಟ್ವಿಟರ್ನಲ್ಲಿ ಪ್ರಕಾಶ್ ರಾಜ್ ಅವರು ಅಪ್ಲೋಡ್ ಮಾಡಿದ್ದಾರೆ.
ಒಂದು ಫೋಟೋದಲ್ಲಿ ರಾಜಕಾರಣಿಗಳ ಶೈಲಿಯಲ್ಲಿ ಕೈಬೀಸುತ್ತಿರುವುದನ್ನು ಕಾಣಬಹುದಾಗಿದೆ. ಫೋಟೋ ಕುರಿತು 'ನಮ್ಮ ಸುಪ್ರೀಂ ಲೀಡರ್ನಿಂದ ಸ್ಫೂರ್ತಿಗೊಂಡು ಇದನ್ನು ಧರಿಸಿದ್ದೇನೆ…ಹಾಯ್ ಗಯ್ಸ್ ನೀವೇಕೆ ಒಮ್ಮೆ ಇದನ್ನು ಪ್ರಯತ್ನಿಸಬಾರದು' ಎಂದು ಟ್ವೀಟ್ ಮಾಡಿದ್ದಾರೆ.
ಇಲ್ಲಿ ಪರೋಕ್ಷವಾಗಿ ಪ್ರಧಾನಿ ಮೋದಿ ಅವರನ್ನು ವ್ಯಂಗ್ಯವಾಡಿದ್ದಾರೆ.ಪ್ರಕಾಶ್ ಅವರು ಧರಿಸಿರುವುದು ನೇಪಾಳಿ ಶೈಲಿಯ ಉಡುಪಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ನೇಪಾಳಕ್ಕೆ ಭೇಟಿ ನೀಡಿದ್ದನ್ನು ಅಣುಕಿಸುವ ಸಲುವಾಗಿ ಪ್ರಕಾಶ್ ರಾಜ್ ಈ ಟ್ವೀಟ್ ಮಾಡಿರಬಹುದು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಚರ್ಚೆಗೆ ಗ್ರಾಸವಾಗಿದ್ದು, ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.