Publish Date: Sat, 27 Jan 2018 (07:10 IST)
Updated Date: Sat, 27 Jan 2018 (07:11 IST)
ಬೆಂಗಳೂರು: ಗಣರಾಜ್ಯೋತ್ಸವ ದಿನವೂ ನಟ ಪ್ರಕಾಶ್ ರೈ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವುದನ್ನು ಬಿಡಲಿಲ್ಲ. ಗುರ್ ಗಾಂವ್ ನಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿ ಪ್ರಕಾಶ್ ರೈ ಕೇಂದ್ರಕ್ಕೆ ಟಾಂಗ್ ಕೊಟ್ಟಿದ್ದಾರೆ.
ನಮ್ಮ ಸರ್ಕಾರ ದೆಹಲಿಯಲ್ಲಿ ಏಷಿಯಾನ್ ನಾಯಕರನ್ನು ಕರೆಸಿ ಅವರೆದುರು ನಮ್ಮ ಸೇನೆಯ ಶಕ್ತಿಯನ್ನು ತೋರಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಅವರಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದ ಮುಗ್ದ ಮಕ್ಕಳ ಮೇಲೆ ನಡೆಯುತ್ತಿದ್ದ ಗೂಂಡಾಗಿರಿಯನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ಪ್ರಕಾಶ್ ರೈ ವ್ಯಂಗ್ಯವಾಡಿದ್ದಾರೆ.
ಪದ್ಮಾವತ್ ಸಿನಿಮಾ ಬಿಡುಗಡೆ ವಿರೋಧಿಸಿ ಗುರುವಾರ ಗುರ್ ಗಾಂವ್ ನಲ್ಲಿ ಶಾಲಾ ಮಕ್ಕಳಿದ್ದ ವಾಹನಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ