Publish Date: Thu, 20 Aug 2020 (11:21 IST)
Updated Date: Thu, 20 Aug 2020 (11:23 IST)
ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಕೊರೋನಾದಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತೀರಾ ಹದಗೆಟ್ಟಿದ್ದು, ಶ್ವಾಸಕೋಶಕ್ಕೂ ಸೋಂಕು ತಗುಲಿದೆ ಎನ್ನಲಾಗಿದೆ.
ಅವರ ಆರೋಗ್ಯದಲ್ಲಿ ಸ್ವಲ್ಪವೂ ಚೇತರಿಕೆಯಲ್ಲಿ, ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಶ್ವಾಸಕೋಶಕ್ಕೂ ಸೋಂಕು ತಗುಲಿದ್ದು, ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.