Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸೇರಲು ನಿರಾಕರಿಸಿದ ಪ್ರಶಾಂತ್?

ಕಾಂಗ್ರೆಸ್ ಸೇರಲು ನಿರಾಕರಿಸಿದ ಪ್ರಶಾಂತ್?
ನವದೆಹಲಿ , ಮಂಗಳವಾರ, 26 ಏಪ್ರಿಲ್ 2022 (18:49 IST)
ನವದೆಹಲಿ : ಸರಣಿ ಸಭೆಗಳ ನಂತರವು ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ಕೆಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್ ನಡುವಿನ ಮಾತುಕತೆ ಈಗ ಅಂತ್ಯಕಂಡಿದೆ. 2024ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಸವಾಲುಗಳನ್ನು ಎದುರಿಸಿ ಮುನ್ನಡೆ ಸಾಧಿಸಲು ಯೋಚಿಸಿದ್ದ ಕಾಂಗ್ರೆಸ್ಗೆ ಇದೀಗ ಹಿನ್ನಡೆಯಾಗಿದೆ.

ಈ ಬಗ್ಗೆ ಪ್ರಶಾಂತ್ ಕಿಶೋರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ತಂತ್ರಗಾರಿಕೆಯ ಭಾಗವಾಗಿ ಪಕ್ಷಕ್ಕೆ ಸೇರಲು ಮತ್ತು ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಕಾಂಗ್ರೆಸ್ನ ಪ್ರಸ್ತಾಪವನ್ನು ನಾನು ನಿರಾಕರಿಸಿದೆ.

ನನ್ನ ಅಭಿಪ್ರಾಯದ ಪ್ರಕಾರ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯವಾಗಿ ಬೇಕಾಗಿರುವುದು ಸರಿಯಾದ ನಾಯಕತ್ವವಾಗಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ನಿಯಮ ಉಲ್ಲಂಘಿಸಿದ್ರೆ ದಂಡ !