ನವದೆಹಲಿ : ಕೇಂದ್ರೀಯ ತನಿಖಾ ದಳ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಇಂದು (ಗುರುವಾರ) ಅಧಿಕಾರ ಸ್ವೀಕರಿಸಿದ್ದಾರೆ.
ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅಧಿಕಾರವಧಿ ಇಂದಿಗೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಮೇ 14 ರಂದು 2 ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಭಾಗವಹಿಸಿದ್ದ ಸಭೆಯಲ್ಲಿ ಸಿಬಿಐ ನಿರ್ದೇಶಕರ ಹುದ್ದೆಗೆ ಪ್ರವೀಣ್ ಸೂದ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!