ನವದೆಹಲಿ : ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕಿ, ಸಂಸದೆ ಮನೇಕಾ ಗಾಂಧಿ ವಿರುದ್ಧ ದೂರು ದಾಖಲಾಗಿದೆ.
ಕೇರಳದಲ್ಲಿ ಪ್ರತಿ ಮೂರು ದಿನಕ್ಕೊಮ್ಮೆ ಆನೆಯೊಂದರ ಹತ್ಯೆ ನಡೆಯುತ್ತಿದೆ, ಅದರಲ್ಲೂ ಮಲಪ್ಪುರಂ ಜಿಲ್ಲೆಯಂತೂ ಅಪರಾಧಗಳ ಗೂಡಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಈ ಬಗ್ಗೆ ವಕೀಲರೊಬ್ಬರು, ಜಿಲ್ಲೆ ಹಾಗೂ ಅಲ್ಲಿನ ನಿವಾಸಿಗಳಿಗೆ ಮನೇಕಾ ಗಾಂಧಿ ಅಪಮಾನ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಮಾಡಿದ್ದಾರೆ ಎಂದು ಮನೇಕಾ ಗಾಂಧಿ ವಿರುದ್ಧ ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದಕಾರಣ ಮನೇಕಾ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 153 ಎ ಮತ್ತು 120ಬಿ ಅಡಿ ದೂರು ದಾಖಲಾಗಿದೆ.