Publish Date: Tue, 03 May 2022 (09:24 IST)
Updated Date: Tue, 03 May 2022 (09:54 IST)
ಅಮರಾವತಿ: ಆಂಧ್ರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ.
ರೈಲು ನಿಲ್ದಾಣದಲ್ಲಿ ಗರ್ಭಿಣಿ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ವಾಸ್ತವವಾಗಿ, ಪ್ರಕಾಶಂ ಜಿಲ್ಲೆಯ ಯರ್ರಗೊಂಡ ಪ್ರದೇಶದಲ್ಲಿ ವಾಸಿಸುವ ಮಹಿಳೆ ತನ್ನ ಪತಿ ಮತ್ತು ಮಕ್ಕಳೊಂದಿಗೆ ರಾತ್ರಿ ರೈಲು ನಿಲ್ದಾಣ ತಲುಪಿದ್ದಾರೆ.
ರಾತ್ರಿಯಾದ ಕಾರಣ ಅವರಿಗೆ ನಿಲ್ದಾಣದಿಂದ ಹೋಗಲು ಬಸ್ಸು ಸಿಗಲಿಲ್ಲ. ಹೀಗಾಗಿ ರೈಲ್ವೇ ನಿಲ್ದಾಣದಲ್ಲೇ ಮಲಗಿದ್ದಾರೆ. ಹೀಗಿರುವಾಗ ಮೂರು ಕುಡುಕರು ಅವರ ಬಳಿಗೆ ಬಂದಿದ್ದಾರೆ. ಬಳಿಕ ಮಹಿಳೆಯ ಪತಿಗೆ ಸಾಕಷ್ಟು ಥಳಿಸಿದ್ದಾರೆ. ತದನಂತರ ಮೂವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಮಹಿಳೆಯ ಪತಿ ಅಲಾರಾಂ ಒತ್ತಿ ರೈಲ್ವೆ ಪೊಲೀಸರ ಸಹಾಯ ಪಡೆಯಲು ಪ್ರಯತ್ನಿಸಿದರು, ಆದರೆ ಅವರಿಗೆ ಯಾವುದೇ ಸಹಾಯ ಸಿಗಲಿಲ್ಲ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಕುಟುಂಬವು ಗುಂಟೂರಿನಿಂದ ಕೃಷ್ಣಾ ಜಿಲ್ಲೆಗೆ ಕೆಲಸ ಹುಡುಕಿಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ದುಷ್ಕರ್ಮಿಗಳು ಪತಿ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಪತ್ನಿ ಮಧ್ಯಪ್ರವೇಶಿಸಿದ್ದು, ಕೋಪಗೊಂಡ ಕಾಮುಕರು ರೇಪಲ್ಲೇ ನಿಲ್ದಾಣದಿಂದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈ ನಿಲ್ದಾಣ ರಾಜ್ಯದ ರಾಜಧಾನಿ ಅಮರಾವತಿಯಿಂದ ಸುಮಾರು 80 ಕಿ.ಮೀ. ದೂರದಲ್ಲಿದೆ. ಹೀಗಾಗಿ ಮಹಿಳೆಯ ಪತಿ ಓಡಿಹೋಗಿ ರೈಲ್ವೇ ಪೊಲೀಸರ ಸಹಾಯ ಪಡೆಯಲು ಪ್ರಯತ್ನಿಸಿದ್ದಾರೆ.