ಚೆನ್ನೈ : ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.
ತಮಿಳುನಾಡಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಲಾಕ್ ಡೌನ್ ವಿಸ್ತರಿಸಲು ತಮಿಳುನಾಡು ಸರ್ಕಾರ ನಿರ್ಧಾರ ಮಾಡಿದೆ. ಆದಕಾರಣ ಅ.31ರವರೆಗೂ ತಮಿಳುನಾಡು ಲಾಕ್ ಡೌನ್ ಆಗಲಿದೆ ಎನ್ನಲಾಗಿದೆ.
ಹಾಗೇ ಕೇರಳದಲ್ಲೂ ಮತ್ತೆ ಕೊರೊನಾ ಹೆಚ್ಚುವ ಭೀತಿ ಹಿನ್ನಲೆಯಲ್ಲಿ ಕೇರಳದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಎಚ್ಚರಿಕೆ ನೀಡಲಾಗಿದೆ ಎನ್ನಲಾಗಿದೆ.