Webdunia - Bharat's app for daily news and videos

Install App

AAP ನಾಯಕ ಮನೀಶ್ ಸಿಸೋಡಿಯಾ, ಸತ್ಯೇಂದರ್ ಜೈನ್ ವಿರುದ್ಧ ಎಫ್‌ಐಆರ್‌ಗೆ ರಾಷ್ಟ್ರಪತಿ ಒಪ್ಪಿಗೆ, ಏನಿದು ಪ್ರಕರಣ

Sampriya
ಗುರುವಾರ, 13 ಮಾರ್ಚ್ 2025 (21:59 IST)
Photo Courtesy X
ನವದೆಹಲಿ: ದೆಹಲಿ ಸರ್ಕಾರದ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ 1,300 ಕೋಟಿ ಹಗರಣ ಸಂಬಂಧ AAP ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ.

ದೆಹಲಿ ಸರ್ಕಾರಿ ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣದ ಸಮಯದಲ್ಲಿ ನಡೆದಿರುವ ಹಗರಣದಲ್ಲಿ ಎಎಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2022 ರಲ್ಲಿ, ದೆಹಲಿ ಸರ್ಕಾರದ ವಿಜಿಲೆನ್ಸ್ ನಿರ್ದೇಶನಾಲಯವು ಆಪಾದಿತ ತರಗತಿ ನಿರ್ಮಾಣ ಹಗರಣದ ತನಿಖೆಗೆ ಶಿಫಾರಸು ಮಾಡಿ ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತು.

ಮೂಲಗಳ ಪ್ರಕಾರ, ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದಾಗ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿಗಳು ಈಗ ಅನುಮೋದನೆ ನೀಡಿದ್ದಾರೆ.

ಕೇಂದ್ರ ವಿಜಿಲೆನ್ಸ್ ಆಯೋಗ (ಸಿವಿಸಿ), ಫೆಬ್ರವರಿ 17, 2020 ರಂದು ತನ್ನ ವರದಿಯಲ್ಲಿ, ಸಾರ್ವಜನಿಕ ಕಾರ್ಯ ಇಲಾಖೆ (ಪಿಡಬ್ಲ್ಯೂಡಿ) ದೆಹಲಿ ಸರ್ಕಾರಿ ಶಾಲೆಗಳಲ್ಲಿ 2,400 ಕ್ಕೂ ಹೆಚ್ಚು ತರಗತಿ ಕೊಠಡಿಗಳ ನಿರ್ಮಾಣದಲ್ಲಿ "ಸ್ಪಷ್ಟ ಅಕ್ರಮಗಳನ್ನು" ಎತ್ತಿ ತೋರಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments