ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸಜ್ಜಾಗುತ್ತಿರುವ ಕೇಂದ್ರ ಮತ್ತು ವಿಪಕ್ಷಗಳು ಪರಸ್ಪರ ಕೈ ಜೋಡಿಸುವ ನಿಟ್ಟಿನಲ್ಲಿ ಇಂದು ಸಭೆ ಸೇರಲಿದ್ದಾರೆ.
ಒಮ್ಮತದ ಅಭ್ಯರ್ಥಿ ಘೋಷಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು, ಅರುಣ್ ಜೇಟ್ಲಿ ಮತ್ತು ರಾಜನಾಥ್ ಸಿಂಗ್ ವಿಪಕ್ಷ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿಪಿಐಎಂ ನಾಯಕ ಸೀತಾರಾಂ ಯಚೂರಿ ಮೊದಲಾದ ನಾಯಕರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
ಆರ್ ಎಸ್ ಎಸ್ ಅಥವಾ ಒಂದು ಕೋಮಿಗೆ ಸೇರಿದ ಅಭ್ಯರ್ಥಿಯನ್ನು ಕೇಂದ್ರ ಆರಿಸಿದರೆ ಬೆಂಬಲಿಸಲು ವಿಪಕ್ಷಗಳು ಸಿದ್ಧವಿದೆ. ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ.