Publish Date: Sun, 18 Jun 2017 (10:08 IST)
Updated Date: Sun, 18 Jun 2017 (10:12 IST)
ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಕೊನೆಗೊಳ್ಳಲು ಇನ್ನು ಕೆಲವೇ ದಿನಗಳು ಬಾಕಿಯಿರುವಂತೆ ಗಲ್ಲು ಶಿಕ್ಷೆಗೊಳಗಾಗಿದ್ದ ಇಬ್ಬರು ಅಪರಾಧಿಗಳ ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.
ನಾಲ್ಕು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಮುಂಬೈಯಲ್ಲಿ ಕ್ಯಾಬ್ ಚಾಲಕ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಕ್ಷಮಾದಾನ ಅರ್ಜಿಗಳನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.
ಈ ಮೂಲಕ ತಮ್ಮ ಅಧಿಕಾರಾವಧಿಯಲ್ಲಿ ಅವರು ಒಟ್ಟು 30 ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಿದಂತಾಗಿದೆ. ಇದರೊಂದಿಗೆ ಅಪರಾಧಿಗಳಿಗೆ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆ ಖಾಯಂ ಆಗಲಿದೆ.