Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ?

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ?
ಮುಂಬೈ , ಶನಿವಾರ, 2 ನವೆಂಬರ್ 2019 (06:46 IST)
ಮುಂಬೈ : ಮಹಾರಾಷ್ಟ್ರದಲ್ಲಿ ಇನ್ನು ಸರ್ಕಾರ ರಚನೆಯಾಗದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವರ್ ಹೇಳಿದ್ದಾರೆ.




ಈ ಬಗ್ಗೆ ಮಾತನಾಡಿದ ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವರ್, ವಿಧಾನ ಸಭೆ ಅವಧಿಯ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದ್ದು, ನವಂಬರ್ 7ರೊಳಗೆ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.


ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ವಾರಗಳೇ ಕಳೆದರೂ ಇನ್ನು ಸರ್ಕಾರ ರಚನೆಯಾಗಿಲ್ಲ.ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನಲೆಯಲ್ಲಿ ಬಿಜೆಪಿ- ಶಿವಸೇನೆಯ ಮೈತ್ರಿ ಸರ್ಕಾರ ರಚನೆಯಾಗಲಿದೆ ಎನ್ನಲಾಗಿತ್ತು. ಆದರೆ ಈ ಎರಡು ಪಕ್ಷಗಳ ನಡುವೆ ಸಿಎಂ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದ ಕಾರಣ ಸರ್ಕಾರ ರಚನೆ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸ್ ಆ್ಯಪ್ ಗೆ ಫಿಂಗರ್ ಪ್ರಿಂಟ್ ಲಾಕ್ ಹಾಕುವುದು ಹೇಗೆ ಗೊತ್ತಾ?