Select Your Language

Notifications

webdunia
webdunia
webdunia
webdunia

ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ : ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ : ನಾಮಪತ್ರ ಸಲ್ಲಿಕೆ
ನವದೆಹಲಿ , ಗುರುವಾರ, 16 ಜೂನ್ 2022 (15:15 IST)
ನವದೆಹಲಿ : ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ ಕಣ ರಂಗೇರಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಸಂಖ್ಯಾಬಲದ ಜಟಾಪಟಿ ನಡೆಯುತ್ತಿದೆ.

ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ.

ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿಯಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಮುಗಿಯಲಿದ್ದು, ಆ ಸ್ಥಾನಕ್ಕೆ ಚುನಾವಣೆಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ.

ನಾಮನಿರ್ದೇಶನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜೂನ್ 29ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಚುನಾವಣೆಯ ಭದ್ರತಾ ಠೇವಣಿ 15 ಸಾವಿರ ರೂ. ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಕೋವಿಡ್ ಏರಿಕೆ!