Select Your Language

Notifications

webdunia
webdunia
webdunia
webdunia

ಎಲೆಕ್ಟ್ರಿಕ್ ವಾಹನಗಳ ಬೆಲೆ ಶೀಘ್ರದಲ್ಲೇ ಇಳಿಕೆ: ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

Electric vehicle, Minister Nitin Gadkari, Fossil fuel

Sampriya

ನವದೆಹಲಿ , ಮಂಗಳವಾರ, 7 ಅಕ್ಟೋಬರ್ 2025 (10:11 IST)
ನವದೆಹಲಿ: ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಯೋಜನೆಯುಳ್ಳವರಿಗೆ ಕೇಂದ್ರ  ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಯಾಗುವ ಸುಳಿವನ್ನು ಅವರು ನೀಡಿದ್ದಾರೆ. 

ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

ನಾನು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಿದಾಗ ಬ್ಯಾಟರಿ ಬೆಲೆ ಪ್ರತಿ ಕಿಲೋವ್ಯಾಟ್ ಗಂಟೆಗೆ 150 ಡಾಲರ್‌ ಆಗಿತ್ತು. ಇಂದು ಅದು ಪ್ರತಿ ಕಿಲೋವ್ಯಾಟ್ ಗಂಟೆಗೆ 55 ಡಾಲರ್‌ನಿಂದ 65 ಡಾಲರ್‌ಗೆ ಇಳಿಕೆಯಾಗಿದೆ. ಮುಂಬರುವ ನಾಲ್ಕರಿಂದ ಆರು ತಿಂಗಳಲ್ಲಿ, ಎಲೆಕ್ಟ್ರಿಕ್ ಸ್ಕೂಟರ್‌ಗಳು, ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ಬಸ್‌ಗಳು ಪೆಟ್ರೋಲ್-ಡೀಸೆಲ್ ಬೆಲೆಗೆ ಸಮಾನವಾಗುತ್ತವೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಪಳೆಯುಳಿಕೆ ಇಂಧನಗಳ ಮೇಲೆ ಅವಲಂಬನೆ ಮಾಡುವುದು ಆರ್ಥಿಕತೆ ದೃಷ್ಟಿಯಿಂದ ಹಾನಿಕಾರಕ. ಭಾರತವು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯು ಆರ್ಥಿಕ ಹೊರೆಯಾಗಿದೆ. ಇಂಧನ ಆಮದಿಗೆ ವಾರ್ಷಿಕವಾಗಿ 22 ಲಕ್ಷ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಎಥೆನಾಲ್, ಸಿಎನ್‌ಜಿ ಅಥವಾ ಐಸೊಬುಟನಾಲ್‌ನಲ್ಲಿ ಚಲಿಸುವ ಎಲೆಕ್ಟ್ರಿಕ್ ಟ್ರಾಕ್ಟರ್‌ಗಳು ಮತ್ತು ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಲು ಟ್ರಾಕ್ಟರ್ ತಯಾರಕರು ಮತ್ತು ಕೃಷಿ ಸಂಶೋಧಕರಿಗೆ ಸಭೆಯಲ್ಲಿ ಹೇಳಿದ್ದೇನೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ