ಎಲೆಕ್ಟ್ರಿಕ್ ವಾಹನಗಳ ಬೆಲೆ ಶೀಘ್ರದಲ್ಲೇ ಇಳಿಕೆ: ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

Sampriya
ಮಂಗಳವಾರ, 7 ಅಕ್ಟೋಬರ್ 2025 (10:11 IST)
ನವದೆಹಲಿ: ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಯೋಜನೆಯುಳ್ಳವರಿಗೆ ಕೇಂದ್ರ  ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಯಾಗುವ ಸುಳಿವನ್ನು ಅವರು ನೀಡಿದ್ದಾರೆ. 

ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

ನಾನು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಿದಾಗ ಬ್ಯಾಟರಿ ಬೆಲೆ ಪ್ರತಿ ಕಿಲೋವ್ಯಾಟ್ ಗಂಟೆಗೆ 150 ಡಾಲರ್‌ ಆಗಿತ್ತು. ಇಂದು ಅದು ಪ್ರತಿ ಕಿಲೋವ್ಯಾಟ್ ಗಂಟೆಗೆ 55 ಡಾಲರ್‌ನಿಂದ 65 ಡಾಲರ್‌ಗೆ ಇಳಿಕೆಯಾಗಿದೆ. ಮುಂಬರುವ ನಾಲ್ಕರಿಂದ ಆರು ತಿಂಗಳಲ್ಲಿ, ಎಲೆಕ್ಟ್ರಿಕ್ ಸ್ಕೂಟರ್‌ಗಳು, ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ಬಸ್‌ಗಳು ಪೆಟ್ರೋಲ್-ಡೀಸೆಲ್ ಬೆಲೆಗೆ ಸಮಾನವಾಗುತ್ತವೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಪಳೆಯುಳಿಕೆ ಇಂಧನಗಳ ಮೇಲೆ ಅವಲಂಬನೆ ಮಾಡುವುದು ಆರ್ಥಿಕತೆ ದೃಷ್ಟಿಯಿಂದ ಹಾನಿಕಾರಕ. ಭಾರತವು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯು ಆರ್ಥಿಕ ಹೊರೆಯಾಗಿದೆ. ಇಂಧನ ಆಮದಿಗೆ ವಾರ್ಷಿಕವಾಗಿ 22 ಲಕ್ಷ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಎಥೆನಾಲ್, ಸಿಎನ್‌ಜಿ ಅಥವಾ ಐಸೊಬುಟನಾಲ್‌ನಲ್ಲಿ ಚಲಿಸುವ ಎಲೆಕ್ಟ್ರಿಕ್ ಟ್ರಾಕ್ಟರ್‌ಗಳು ಮತ್ತು ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಲು ಟ್ರಾಕ್ಟರ್ ತಯಾರಕರು ಮತ್ತು ಕೃಷಿ ಸಂಶೋಧಕರಿಗೆ ಸಭೆಯಲ್ಲಿ ಹೇಳಿದ್ದೇನೆ ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments