Select Your Language

Notifications

webdunia
webdunia
webdunia
webdunia

ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ : ರಾಹುಲ್ ಕಿಡಿ

ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ  : ರಾಹುಲ್ ಕಿಡಿ
ನವದೆಹಲಿ , ಮಂಗಳವಾರ, 6 ಸೆಪ್ಟಂಬರ್ 2022 (08:08 IST)
ನವದೆಹಲಿ : ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ದ್ವೇಷ ಹೆಚ್ಚಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷವನ್ನು ಹರಡುತ್ತಾ ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ. 8 ವರ್ಷಗಳಲ್ಲಿ ಭಾರತವನ್ನು ದುರ್ಬಲಗೊಳಿಸಿದ್ದು, ಪಾಕಿಸ್ತಾನ ಮತ್ತು ಚೀನಾ ಇದರ ಲಾಭ ಪಡೆದುಕೊಳ್ಳುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರು ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಮಾತನಾಡಿದರು. 

ದೇಶದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದ್ವೇಷ ಬೆಳೆಯುತ್ತಿದೆ. ಹಣದುಬ್ಬರ, ನಿರುದ್ಯೋಗ ಸಮಸ್ಯೆ ಬೆಲೆ ಏರಿಕೆ ಮೊದಲಾದ ಸಮಸ್ಯೆಗಳು ಜನರನ್ನು ದ್ವೇಷದ ಕಡೆ ತಿರುಗುವಂತೆ ಮಾಡುತ್ತಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಎರಡೂ ಸೇರಿ ದೇಶವನ್ನು ವಿಭಜನೆ ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನೀರು ಸರಬರಾಜು‌ ಸ್ಥಗಿತ