Select Your Language

Notifications

webdunia
webdunia
webdunia
webdunia

ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ , ಸೋಮವಾರ, 8 ಮೇ 2023 (13:44 IST)
ನವದೆಹಲಿ : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಭಾನುವಾರ ಸಾವಿಗೀಡಾಯಿತು. ದಸರಾ ಆನೆ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
 
“ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ” ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. 

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ ಆನೆ (67) ಭಾನುವಾರ ಸಾವನ್ನಪ್ಪಿತು. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಮೃತಪಟ್ಟಿತು.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಪಿಎಂ ಆಗಿದ್ದರೆ ನಮ್ಮ ದೇಶ ದಿವಾಳಿ ಆಗುತ್ತಿತ್ತು : ವಿಜಯೇಂದ್ರ