Webdunia - Bharat's app for daily news and videos

Install App

ಗಣರಾಜ್ಯೋತ್ಸವದಲ್ಲಿ ರಾಜಸ್ಥಾನಿ ಪೇಟದಲ್ಲಿ ಮಿರಮಿರ ಮಿಂಚಿದ ಪ್ರಧಾನಿ ಮೋದಿ

Sampriya
ಭಾನುವಾರ, 26 ಜನವರಿ 2025 (14:05 IST)
Photo Courtesy X
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 76ನೇ ಗಣರಾಜ್ಯೋತ್ಸವ ಸಂಭ್ರಮದ ವೇಳೆ ಧರಿಸಿದ ಪೇಟ ಗಮನಸೆಳೆದಿದೆ.

ಭಾರತದ ವೈವಿಧ್ಯತೆಯನ್ನು ಸಂಕೇತಿಸುವ ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಈ ಬಾರಿ ಧರಿಸಿದ್ದರು. ಜೊತೆಗೆ ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್, ಬಂದಗಾಲ ಪೈಜಾಮಾ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದರು.

ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು.

ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು.

76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10:30ಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.

ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಹಾಗೆಯೇ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments