Select Your Language

Notifications

webdunia
webdunia
webdunia
webdunia

ಸಿಎಬಿ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಹಾಕಿದ್ದಾರೆ ಈ ಸವಾಲು

ಸಿಎಬಿ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಹಾಕಿದ್ದಾರೆ ಈ ಸವಾಲು
ರಾಂಚಿ , ಬುಧವಾರ, 18 ಡಿಸೆಂಬರ್ 2019 (06:42 IST)
ರಾಂಚಿ : ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸುಳ್ಳು ಮಾಹಿತಿ ಸೃಷ್ಟಿಸುತ್ತಿರುವ ಕಾಂಗ್ರೆಸ್ , ಎಲ್ಲಾ ಪಾಕಿಸ್ತಾನಿಗಳಿಗೆ ಭಾರತೀಯ ಪೌರತ್ವ ನೀಡುತ್ತೇವೆ ಎಂಬುದಾಗಿ ಘೋಷಿಸಿ ಎಂದು ಪ್ರಧಾನಿ ಮೋದಿ ಸವಾಲು ಹಾಕಿದ್ದಾರೆ.



ಜಾರ್ಖಂಡ್ ನಲ್ಲಿ ನಡೆದ ಚುನಾವಣಾ ಜಾಥದಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಕಾಂಗ್ರೆಸ್ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದೆ. ಇದರಿಂದ ದೇಶದ ಯಾವ ನಾಗರೀಕನಿಗೂ ತೊಂದರೆಯಾಗುವುದಿಲ್ಲ. ಈ ಬಗ್ಗೆ ನಾನು ಮಿತ್ರ ಪಕ್ಷಗಳಿಗೆ ಸವಾಲು ಹಾಕುತ್ತೇನೆ.  ಎಲ್ಲಾ ಪಾಕಿಸ್ತಾನಿಗಳಿಗೆ ಭಾರತೀಯ ಪೌರತ್ವ ನೀಡುತ್ತೇವೆ ಎಂಬುದಾಗಿ ಘೋಷಿಸಿ ಎಂದು ಕಿಡಿಕಾರಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸುಳ್ಳು ಮಾಹಿತಿ ಮತ್ತು ಭಯ ಸೃಷ್ಟಿಸಲು ಕಾಂಗ್ರೆಸ್ ರಾಜಕೀಯವನ್ನು ಬಳಸಿಕೊಳ್ಳುತ್ತಿದೆ. ಇದು ದೇಶದ ಯಾವ ಪ್ರಜೆಗಳ ಮೇಲೂ ಪ್ರಭಾವ ಬೀರುವುದಿಲ್ಲ. ಪಕ್ಕದ ದೇಶಗಳ ಅಲ್ಪಸಂಖ್ಯಾತರಿಗೆ ಈ ಕಾನೂನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ದೂರು ನೀಡಲು ಹೊರಟ ಯುವತಿಗೆ ಆರೋಪಿಗಳು ಮಾಡಿದ್ದೇನು ಗೊತ್ತಾ?