Daily Horoscope
✕

ಗೇಮರ್‌ಗಳ ಜತೆ ಆಟವಾಡಿ ಸಂವಾದ ನಡೆಸಿದ ಪ್ರಧಾನಿ ಮೋದಿ

Sampriya
ಗುರುವಾರ, 11 ಏಪ್ರಿಲ್ 2024 (17:59 IST)
Photo Courtesy X
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗೇಮಿಂಗ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಭಾರತದ ಪ್ರಮುಖ ಯುವ ಆಟಗಾರರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಕಿರು ವಿಡಿಯೊ ತುಣುಕಿನೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಗೇಮಿಂಗ್ ಕ್ಷೇತ್ರದಲ್ಲಿ ಹೊಸ ಬೆಳವಣಿಗೆ ಕುರಿತ ಚರ್ಚೆಯ ಜತೆಗೆ ಕೇಂದ್ರದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಆಗಿರುವ ಬದಲಾವಣೆ, ಕೌಶಲಭರಿತ ಗೇಮರ್‌ಗಳಿಂದ ಉದ್ಯಮದ ಬೆಳವಣಿಗೆ ಮೂಲಕ ಆಗುತ್ತಿರುವ ಲಾಭದ ಕುರಿತೂ ಚರ್ಚೆ ನಡೆಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.


ಗೇಮರ್‌ಗಳು ಈ ವೇಳೆ ಜೂಜು ಮತ್ತು ಗೇಮಿಂಗ್‌ ನಡುವಿನ ವ್ಯತ್ಯಾಸ ಕುರಿತು ಹೇಳಿಕೊಂಡರು.

ಮೋದಿ ಜತೆಗಿನ ಸಂವಾದದಲ್ಲಿ  ಭಾರತದ ಮುಂಚೂಣಿಯ ಗೇಮರ್‌ಗಳಾದ ತೀರ್ಥ್‌ ಮೆಹ್ತಾ, ಪಾಯಲ್ ಧಾರೆ, ಅನಿಮೇಶ್ ಅಗರವಾಲ್, ಅನ್ಶು ಬಿಷ್ತ್, ನಮನ್ ಮಾಥೂರ್, ಮಿಥಿಲೇಶ್ ಪಠಾಣಕರ್, ಗಣೇಶ ಗಂಗಾಧರ ಅವರು ಪಾಲ್ಗೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments