ದೆಹಲಿ : ಜನಸಾಮಾನ್ಯರಿಗೆ ತೊಂದರೆ ಕೊಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆಗಳನ್ನು ನಿರ್ಮಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಹಣದುಬ್ಬರ ಶುರುವಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದೂ ಕಿಡಿಕಾರಿದ್ದಾರೆ.
ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ ಎಂಬ ಮಾಧ್ಯಮ ವರದಿಯೊಂದನ್ನು ಶೇರ್ ಮಾಡಿಕೊಂಡಿರುವ ಪ್ರಿಯಾಂಕಾ ಗಾಂಧಿ, ಮೋದಿ ಜೀ ಸರ್ಕಾರ ಸಾರ್ವಜನಿಕರಿಗೆ ತೊಂದರೆ ಕೊಡುವುದರಲ್ಲಿ ಬಹುದೊಡ್ಡ ದಾಖಲೆಗಳನ್ನು ನಿರ್ಮಿಸುತ್ತಿದೆ. ನಿರುದ್ಯೋಗ ಮಿತಿಮೀರಿದೆ. ಸರ್ಕಾರಿ ಆಸ್ತಿಗಳು ಮಾರಾಟವಾಗುತ್ತಿವೆ. ಪೆಟ್ರೋಲ್ ರೇಟ್ ವಿಪರೀತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್ ಹಿರಿಯ ವಕ್ತಾರ ರಣದೀಪ್ ಸುರ್ಜೇವಾಲಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದೇ ಮಾಧ್ಯಮ ವರದಿಯನ್ನು ಶೇರ್ ಮಾಡಿಕೊಂಡು ಅಚ್ಛೆ ದಿನ್ (ಒಳ್ಳೆಯ ದಿನಗಳು) ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.