Select Your Language

Notifications

webdunia
webdunia
webdunia
webdunia

ಸಿಜೆಐ ನಿವಾಸದಲ್ಲಿ ಪ್ರಧಾನಿ ಮೋದಿ ಗಣಪತಿ ಪೂಜೆ: ಪ್ರಶಾಂತ್‌ ಭೂಷಣ್‌ ಆಕ್ಷೇಪ

Prime Minister Narendra Modi

Sampriya

ನವದೆಹಲಿ , ಗುರುವಾರ, 12 ಸೆಪ್ಟಂಬರ್ 2024 (14:23 IST)
Photo Courtesy X
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾತ್ರಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡು, ಮಂಗಳಾರತಿ ಮಾಡಿದ್ದಾರೆ. ಈ ಕುರಿತು ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

ಚಂದ್ರಚೂಡ್ ನಿವಾಸದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಗಣಪತಿ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಚಂದ್ರಚೂಡ್ ಅವರ ಪತ್ನಿ ಇದ್ದರು.

ಮಹಾರಾಷ್ಟ್ರದ ಸಾಂಪ್ರದಾಯಿಕ ಉಡುಪನ್ನು ಧರಿಸಿದ್ದ ಮೋದಿ, ಗಣೇಶ ದೇವರು ನಮಗೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ನೀಡಲಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.

ಈ ಕುರಿತು  'ಎಕ್ಸ್‌'ನಲ್ಲಿ ಬರೆದುಕೊಂಡಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಇದು ಕಾರ್ಯಾಂಗದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನಿವಾಸಕ್ಕೆ ಪ್ರಧಾನಿ ಅವರ ಖಾಸಗಿ ಭೇಟಿಗೆ ಅವಕಾಶ ಮಾಡಿಕೊಟ್ಟಿರುವುದು ನಿಜಕ್ಕೂ ಆಘಾತಕಾರಿಯಾಗಿದ್ದು, ಕೆಟ್ಟ ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಆಝಾನ್, ನಮಾಜ್ ವೇಳೆ ದೇವಾಲಯದಲ್ಲಿ ದುರ್ಗಾ ಪೂಜೆ ನಿಲ್ಲಿಸಬೇಕು