Select Your Language

Notifications

webdunia
webdunia
webdunia
webdunia

ಮಕ್ಕಳ ಕಲಿಕೆಯ ಸಮಸ್ಯೆಯನ್ನು ರಾಜಕೀಯ ವಿಚಾರಕ್ಕೆ ಬಳಸಿ ತಮಾಷೆ ಮಾಡಿ ಟೀಕೆಗೆ ಗುರಿಯಾದ ಪ್ರಧಾನಿ ಮೋದಿ

ಮಕ್ಕಳ ಕಲಿಕೆಯ ಸಮಸ್ಯೆಯನ್ನು ರಾಜಕೀಯ ವಿಚಾರಕ್ಕೆ ಬಳಸಿ ತಮಾಷೆ ಮಾಡಿ ಟೀಕೆಗೆ ಗುರಿಯಾದ ಪ್ರಧಾನಿ ಮೋದಿ
ನವದೆಹಲಿ , ಸೋಮವಾರ, 4 ಮಾರ್ಚ್ 2019 (10:49 IST)
ನವದೆಹಲಿ : ವಿದ್ಯಾರ್ಥಿಗಳ ಜೊತೆಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳ ಕಲಿಕೆಯ ಸಮಸ್ಯೆಯನ್ನು ರಾಜಕೀಯ ವಿಚಾರಕ್ಕೆ ಬಳಸಿ ತಮಾಷೆ ಮಾಡಿ ಇದೀಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಸ್ಮಾರ್ಟ್ ಇಂಡಿಯಾ ಹ್ಯಾಕಾಥಾನ್‍ನಲ್ಲಿ ಪ್ರಧಾನಿ ಜೊತೆಗಿನ ಸಂವಾದದ ವೇಳೆ ಡೆಹ್ರಾಡೂನ್‍ನ ವಿದ್ಯಾರ್ಥಿನಿಯೊಬ್ಬಳು ಡೈಲೆಕ್ಸಿಕ್ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು ಅಂದರೆ ಓದು-ಬರಹದ ಕಲಿಕೆ ನಿಧಾನಗತಿಯಲ್ಲಿರುವ ಮಕ್ಕಳಿಗೆ ಸಹಾಯ ಮಾಡಲು ನಿರ್ಧರಿಸಿದ್ದೇವೆ. ತಾರೇ ಜಮೀನ್ ಪರ್ ಸಿನಿಮಾದಲ್ಲಿ ನೋಡಿದಂತೆ ಈ ಮಕ್ಕಳು ಅತ್ಯಂತ ಬುದ್ಧಿವಂತರು ಮತ್ತು ಸೃಜನಶೀಲರು ಆಗಿರುತ್ತಾರೆ ಎಂದು ಹೇಳಿದಳು.


ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ 40-50 ವರ್ಷದ ಮಕ್ಕಳಿಗೂ ಈ ಕಾರ್ಯಕ್ರಮ ಉಪಯೋಗ ಆಗುತ್ತಾ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾಲೆಳೆದಿದ್ದಾರೆ. ಮಕ್ಕಳ ಕಲಿಕೆಯ ಸಮಸ್ಯೆಯನ್ನು ಮೋದಿ ರಾಜಕೀಯಕ್ಕಾಗಿ ತಮಾಷೆ ಮಾಡಿದ ಎಷ್ಟು ಸರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ ನೆಟ್ಟಿಗರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶದಿಂದ ರಸಗೊಬ್ಬರ ಆಮದು ಮಾಡಿಕೊಳ್ಳಲು ಉತ್ತಮವಾದ ಸಲಹೆ ನೀಡಿದ ನಿತಿನ್ ಗಡ್ಕರಿ