Select Your Language

Notifications

webdunia
webdunia
webdunia
webdunia

ರಾಷ್ಟ್ರೀಯ ಯುವಜನೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ: ಬೊಮ್ಮಾಯಿ

ರಾಷ್ಟ್ರೀಯ ಯುವಜನೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ: ಬೊಮ್ಮಾಯಿ
ಬೆಂಗಳೂರು , ಮಂಗಳವಾರ, 10 ಜನವರಿ 2023 (09:23 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಜ. 12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 7 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.

ಜ. 19ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ಎಲ್ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸುಧಾಕರ್ ಬಗ್ಗೆ ಸೋಮಶೇಖರ್ ಭವಿಷ್ಯ?