Select Your Language

Notifications

webdunia
webdunia
webdunia
webdunia

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

Sampriya

ನವದೆಹಲಿ , ಶುಕ್ರವಾರ, 26 ಸೆಪ್ಟಂಬರ್ 2025 (19:11 IST)
ನವರಾತ್ರಿಯ ಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದ ಕಮಲದ ಮೊಗದೊಳೆ ಕಮಲದ ಕಣ್ಣೋಳೆ ಕಮಲವ ಕೈಯಲ್ಲಿ ಹಿಡಿದೊಳೆ ಎಂಬ ಹಾಡನ್ನು ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ, ಶುಭಕೋರಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

1984ರಲ್ಲಿ ಬಿಡುಗಡೆಗೊಂಡ ‘ಹೊಸ ಇತಿಹಾಸ’ ಚಿತ್ರಕ್ಕಾಗಿ ಖ್ಯಾತ ಗಾಯಕಿ ಎಸ್. ಜಾನಕಿ ಅವರು ಹಾಡಿರುವ ‘ಕಮಲದ ಮೊಗದೊಳೆ ಕಮಲದ ಕಣ್ಣೋಳೆ ಕಮಲವ ಕೈಯಲ್ಲಿ ಹಿಡಿದೊಳೆ.’ ಎಂಬ ಹಾಡನ್ನಂತೂ ಕೇಳದವರಿಲ್ಲ. ಇನ್ನೂ ನವರಾತ್ರಿ ಸಂದರ್ಭದಲ್ಲಿ ರಾಜ್ಯದ ಪ್ರತಿ ಭಾಗದಲ್ಲೂ ೀ ಹಾಡನ್ನು ಕೇಳುತ್ತೇವೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ, ಈ ಹಾಡನ್ನು ಮೆಚ್ಚಿ, ಎಕ್ಸ್‌ನಲ್ಲಿ ಶೇರ್ ಮಾಡಿ, ನವರಾತ್ರಿಯ ಶುಭಾಶಯವನ್ನು ಕೋರಿದ್ದಾರೆ.

ನರೇಂದ್ರ ಮೋದಿಯವರ ಅಧಿಕೃತ ಟ್ವಿಟರ್​​ ಖಾತೆ(@narendramodi)ಯಲ್ಲಿ ಕನ್ನಡದ ಈ ಪ್ರಸಿದ್ಧ ಭಕ್ತಿಗೀತೆಯ ವಿಡಿಯೋವನ್ನು ಹಾಕಿ ದೇಶದ ಜನತೆಗೆ ನವರಾತ್ರಿ ಶುಭಾಶಯ ಕೋರಲಾಗಿದೆ. ದೇವಿಯೂ ಎಲ್ಲಾ ಭಕ್ತರಿಗೆ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಆಕೆಯ ಪ್ರೀತಿಯ ವಾತ್ಸಲ್ಯವು ಪ್ರತಿಯೊಬ್ಬರ ಜೀವನದಲ್ಲೂ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಟ್ವೀಟ್ ಮಾಡಲಾಗಿದೆ.

ಇಂದು(ಸೆ.26) ಬೆಳಗ್ಗೆ 9.48ಕ್ಕೆ ಹಂಚಿಕೊಂಡಿರುವ ಈ ಪೋಸ್ಟ್​​ ಈಗಾಗಲೇ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಕನ್ನಡಿಗರು “ನಮ್ಮ ಕನ್ನಡ, ನಮ್ಮ ಹೆಮ್ಮೆ” ಎಂದು ಕಾಮೆಂಟ್​​ ಮಾಡಿದ್ದಾರೆ. ಸದ್ಯ ಪೋಸ್ಟ್​​ ಎಲ್ಲೆಡೆ ವೈರಲ್​ ಆಗುತ್ತಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌