Select Your Language

Notifications

webdunia
webdunia
webdunia
webdunia

ಒಡಿಶಾ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಒಡಿಶಾ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಭುವನೇಶ್ವರ್ , ಭಾನುವಾರ, 4 ಜೂನ್ 2023 (12:06 IST)
ಭುವನೇಶ್ವರ್ : ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ.
 

ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.  ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್ ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.

ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರಧಾನಿಯವರಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಾಥ್ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ : ಶಿವಕುಮಾರ್