Publish Date: Thu, 12 Jan 2023 (07:22 IST)
Updated Date: Thu, 12 Jan 2023 (08:50 IST)
ಹುಬ್ಬಳ್ಳಿ : ಇಂದಿನಿಂದ ನಾಲ್ಕು ದಿನಗಳ ಕಾಲ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ 26 ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ನಡೆಯಲಿದೆ.
ಮೋದಿಯವರ ಸ್ವಾಗತಕ್ಕೆ ಹುಬ್ಬಳ್ಳಿ ಮಧುವಣಗಿತ್ತಿ ಕಂಗೊಳಿಸುತ್ತಿದೆ. ಮತ್ತೊಮ್ಮೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಬಿಜೆಪಿ ನಾಯಕರು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ಅಮಿತ್ ಶಾ, ನಡ್ಡಾ, ಗಡ್ಕರಿ ಬಳಿಕ ಈಗ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರ್ತಿದ್ದಾರೆ.
ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಧಾರವಾಡದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಗೆಂದು ಆಗಮಿಸಿಸೋ ನಮೋ ಸ್ವಾಗತಕ್ಕೆ ಧಾರವಾಡ ಜಿಲ್ಲೆ ಸಕಲ ರೀತಿಯಲ್ಲಿ ಸಜ್ಜಾಗಿದೆ.